ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಇತರ 5 ಆರೋಪಿಗಳಿಗೂ ಜಾಮೀನು

ಬೆಂಗಳೂರು:

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಪವಿತ್ರಾ ಗೌಡಗೆ  ಜಾಮೀನು ಸಿಕ್ಕಿರುವ ಬೆನ್ನಲ್ಲೇ ಇದೀಗ ಇತರ ಐವರು ಆರೋಪಿಗಳಿಗೂ ಬೇಲ್‌ ಸಿಕ್ಕಿದೆ. ಜೈಲಿನಲ್ಲಿ ಉಳಿದಿದ್ದ ಐವರಿಗೆ ಹೈಕೋರ್ಟ್ ನಿನ್ನೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

   ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಹಾಗೂ ವಿನಯ್‌ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ನ್ಯಾಯಾಲಯ ಅವರ ಅರ್ಜಿಯನ್ನು ಪುರಸ್ಕರಿಸಿದೆ. , ಈ ಮೂಲಕ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ 17 ಮಂದಿಗೆ ಜಾಮೀನಿನಲ್ಲಿ ಹೊರಬಂದಿದ್ದಾರೆ.

    ಇನ್ನು ಆರೋಪಿಗಳಿಗೆ ಜಾಮೀನು ನೀಡುವಾಗ ಹೈಕೋರ್ಟ್‌ ಕೆಲವೊಂದು ಷರತ್ತು ವಿಧಿಸಿದೆ. 1 ಲಕ್ಷ ರೂ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸಬೇಕು. ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕ್ಷಿದಾರರಿಗೆ ಬೆದರಿಕೆ ಹಾಕಬಾರದು ಹಾಗೂ ಮುಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಕೂಡದು ಎಂದು ಷರತ್ತುವಿಧಿಸಿ ನ್ಯಾ.ಜೈಶಂಕರ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿದರು.

   ಕಳೆದ ಜೂನ್ 8ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಪಟ್ಟಣಗೆರೆ ಶೆಡ್​ನಲ್ಲಿ ಹತ್ಯೆ ಮಾಡಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್, ಪವಿತ್ರ ಗೌಡ, ನಾಗರಾಜು, ಅನು ಕುಮಾರ್, ಎಂ ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

   ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ. ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಯಾಕೆ ಬಂಧಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.

Recent Articles

spot_img

Related Stories

Share via
Copy link