ಇಂದಿನಿಂದ ರಾಜ್ಯದಲ್ಲಿ ಡಿ.28ರವರೆಗೆ ಮಳೆಯ ಮುನ್ಸೂಚನೆ

ಬೆಂಗಳೂರು

    ಡಿಸೆಂಬರ್ ಕಳೆಯುತ್ತಾ ಬಂದರೂ ಚಳಿಯ ಪ್ರಮಾಣ ಕಡಿಮೆಯೇ ಇದೆ. ಡಿಸೆಂಬರ್ 28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

 

   ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

   ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಬಾಗಲಕೋಟೆಯಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

Recent Articles

spot_img

Related Stories

Share via
Copy link