ಗಣರಾಜ್ಯೋತ್ಸವ ಸಂಭ್ರಮದ ವೇಳೆ ಅವಘಡ….!

ಹೊಸಪೇಟೆ:

  ಗಣರಾಜ್ಯೋತ್ಸವ ಆಚರಣೆ ವೇಳೆ ದೇಶದ ಎರಡನೇ ಬೃಹತ್ ಧ್ವಜಸ್ತಂಭಕ್ಕೆ ಏರುತ್ತಿದ್ದ ಬೃಹತ್ ಧ್ವಜ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದೆ.

   ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್‌ ಖಾನ್ ಅವರು ಸಾಂಕೇತಿಕವಾಗಿ ಧ್ವಜಾರೋಹಣ ನೆರವೇರಿಸಿದ್ದರು. ನಂತರ ಅವರು ಅವರು ಪರೇಡ್‌ನಲ್ಲಿ ಪಥಸಂಚಲನದಲ್ಲಿ ಭಾಗಿಯಾಗಿ ಗೌರವ ವಂದನೆ ಸ್ವೀಕರಿಸುತ್ತಿದ್ದ ವೇಳೆ ಧ್ವಜ ಏಕಾಏಕಿ ಕುಸಿದು ಬಿದ್ದಿದೆ. ಘಟನೆ ವೇಳೆ ಯಾವುದೇ ಅನಾಹುತಗಳು ಸಂಭವಿಸಿಲ್ಲ.

   ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು, ತನಿಖೆಗೆ ಆದೇಶಿಸಿದ್ದು, ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

   ಧ್ವಜಸ್ತಂಭವನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡದಿರುವುದು ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆ ತ್ರಿವರ್ಣ ಜಾರಿ ಕೆಳಗೆ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

   ಧ್ವಜಸ್ತಂಭ ನಿರ್ವಹಣೆ ಬಗ್ಗೆ ಅಸಮಾಧಾನವಾಗಿದೆ. ತನಿಖೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ನಾನು ಪುನೀತ್ ರಾಜ್‌ಕುಮಾರ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ್ದೆ. ಇಂತಹ ಘಟನೆ ಯಾವತ್ತೂ ನಡೆದಿಲ್ಲ. ವರದಿ ಸಲ್ಲಿಸಿದ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಮೀರ್ ಅವರು ಹೇಳಿದ್ದಾರೆ.

Recent Articles

spot_img

Related Stories

Share via
Copy link