ನವದೆಹಲಿ:
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ 2025-26 ರ ಬಜೆಟ್ ಮಂಡಿಸಿದ್ದಾರೆ. ಅವರು ಹಳೆಯ ರಾಷ್ಟ್ರೀಯ ಉಳಿತಾಯ ಯೋಜನೆ ಖಾತೆಗಳನ್ನು ಹೊಂದಿರುವ ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದ್ದಾರೆ.
ಟಿಡಿಎಸ್ ದರಗಳನ್ನು ಹಾಗೂ ತೆರಿಗೆದಾರರಿಗೆ ಹೆಚ್ಚು ಅಗತ್ಯವಿರುವ ಪರಿಹಾರವನ್ನು ನೀಡಲಾಗುವುದು. ತೆರಿಗೆ ವಿನಾಯಿತಿ ಮಿತಿಯನ್ನು 50,000 ರೂಪಾಯಿಂದ 1 ಲಕ್ಷವರೆಗೆ ಹೆಚ್ಚಿಸಲಾಗುತ್ತಿದೆ ಎಂದಿದ್ದಾರೆ. ಅನೇಕ ಹಿರಿಯ ನಾಗರಿಕರ ಹಳೆಯ ರಾಷ್ಟ್ರೀಯ ಉಳಿತಾಯ ಯೋಜನೆ ಖಾತೆಗಳನ್ನು ಹೊಂದಿದ್ದಾರೆ. ಅಂತಹ ಅಕೌಂಟ್ಗಳಿಗೆ ಇನ್ಮುಂದೆ ಬಡ್ಡಿ ಪಾವತಿಸುವುದು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಬಾಡಿಗೆ ಮೇಲಿನ ಟಿಡಿಎಸ್ ಅನ್ನು 6 ಲಕ್ಷ ಹೆಚ್ಚಿಸಲಾಗಿದೆ.
ಮಧ್ಯಮ ವರ್ಗದ ಕುಟುಂಬಗಳಿಗೆ ಈ ಬಾರಿಯ ಬಂಪರ್ ಕೊಡುಗೆಯನ್ನು ನೀಡಿದೆ. ವಾರ್ಷಿಕ ಆದಾಯ 12 ಲಕ್ಷದವರೆಗಿನ ಉದ್ಯೋಗಿಗಳಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ. ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ಒಂದು ವರ್ಷದಿಂದ ನಾಲ್ಕು ವರ್ಷಗಳವರೆಗೆ ವಿಸ್ತರಿಸಲಾಗಿದೆ, ಮುಂದಿನ ವಾರ ಹಣಕಾಸು ಅಧಿವೇಶನದಲ್ಲಿ ಹಣಕಾಸು ಸಚಿವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲಿದ್ದಾರೆ. ಇನ್ನು ವಿಮಾ ವಲಯಕ್ಕೆ ಎಫ್ಡಿಐ ಮಿತಿಯನ್ನು ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇನ್ನು ರಾಜ್ಯಗಳಿಗೆ 50 ವರ್ಷಗಳ ಅವಧಿಗೆ ಬಡ್ಡಿ ರಹಿತವಾಗಿ 1.5 ಲಕ್ಷ ಕೋಟಿ ನೆರವನ್ನು ಮೂಲಸೌಕರ್ಯ ಅಭಿವೃದ್ಧಿಗೆ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 2021ರಲ್ಲಿ ಈ ಯೋಜನೆಯನ್ನು ಮೊದಲ ಬಾರಿಗೆ ಜಾರಿಗೆ ತರಲಾಗಿತ್ತು.