ಬೆಂಗಳೂರು:
ಕರ್ನಾಟಕ ಸರ್ಕಾರ ಮತ್ತೆ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಐಎಎಸ್ ಅಧಿಕಾರಿಗಳನ್ನು ತತ್ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆಗೊಳಿಸಿ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಲಾಗಿದೆ. ಜನವರಿ 25ರಂದು ಬೆಂಗಳೂರು ಗ್ರಾಮಾಂತರ ಡಿಸಿಯಾಗಿದ್ದ ಡಾ. ಶಿವ ಶಂಕರ ಎನ್. ವರ್ಗಾವಣೆ ಮಾಡಲಾಗಿತ್ತು.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಾಂತೇಶ್ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ. ಬಸವರಾಜು ಎ. ಬಿ. ಹೊಸ ಜಿಲ್ಲಾಧಿಕಾರಿಯಾಗಿದ್ದಾರೆ.
ಬಸವರಾಜು ಎ. ಬಿ. ಐಎಎಸ್ (ಕೆಎನ್: 2017) ಅವರು ಉಪ ಕಾರ್ಯದರ್ಶಿ ಮೂಲ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹುದ್ದೆಯಲ್ಲಿದ್ದರು. ಅವರನ್ನು ತತ್ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
2024ರ ಅಕ್ಟೋಬರ್ನಲ್ಲಿ ಕರ್ನಾಟಕ ಸರ್ಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಬದಲಾವಣೆ ಮಾಡಿತ್ತು. ನೂತನ ಜಿಲ್ಲಾಧಿಕಾರಿಯಾಗಿ ಶ್ರೀನಿವಾಸ ಕೆ. ಐಎಎಸ್ (ಕೆಎನ್: 2012) ನೇಮಕ ಮಾಡಿತ್ತು. ಈ ಹುದ್ದೆಯಲ್ಲಿದ್ದ ದಯಾನಂದ ಕೆ. ಎ. ಐಎಎಸ್ ವರ್ಗಾವಣೆ ಮಾಡಿತ್ತು. ಹೊಸ ಸಿಇಒ ನೇಮಕ: ಜನವರಿ 25ರಂದು ಕರ್ನಾಟಕ ಸರ್ಕಾರ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ತನ್ವೀರ್ ಆಸಿಫ್ ವರ್ಗಾವಣೆ ಮಾಡಿತ್ತು. ಡಾ. ಕುಮಾರ ಐಎಎಸ್ (ಕೆಎನ್: 2015). ಜಿಲ್ಲಾಧಿಕಾರಿಗಳು ಮಂಡ್ಯ ಅವರನ್ನು ತತ್ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಿಸಿತ್ತು.
ಈಗ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನಂದಿನಿ ಕೆ. ಆರ್. ನೇಮಕ ಮಾಡಲಾಗಿದೆ. 2017ನೇ ಬ್ಯಾಚ್ ಐಎಎಸ್ ಅಧಿಕಾರಿ ನಂದಿನಿ ಕೆ. ಆರ್. ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ನಂದಿನಿ ಕೆ. ಆರ್. ಕೋಲಾರ ಮೂಲದವರು. ಐಎಎಸ್ ಪರೀಕ್ಷೆಯಲ್ಲಿ ಇಡೀ ಭಾರತಕ್ಕೆ ಟಾಪರ್ ಆಗಿ ಗಮನ ಸೆಳೆದವರು. ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಒ ಸೇರಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದವರು. ಸದ್ಯ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿಯೇ ಎರಡು ಹೆರಿಗೆ ಮಾಡಿಸಿಕೊಂಡು ಜನರಿಗೆ ಮಾದರಿಯಾದ ಅಧಿಕಾರಿಯಾಗಿದ್ದಾರೆ.
![](https://prajapragathi.com/wp-content/uploads/2025/02/bangalore-gramanthara.gif)