ಭಾರತದ ಬಳಿ ಸಾಕಷ್ಟು ಹಣವಿದೆ : ನಾವೇಕೆ ಅವರಿಗೆ ಹಣ ನೀಡಬೇಕು: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ :

   ಭಾರತ ಬಳಿ ಸಾಕಷ್ಟು ಹಣ ಇರುವಾಗ , ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್‌ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ.

    ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ ಬಳಿ ಹೆಚ್ಚು ಹಣವಿದೆ. ವಿಶ್ವದಲ್ಲಿ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಭಾರತ ಒಂದು. ಅವರ ಸುಂಕಗಳು ತುಂಬಾ ಹೆಚ್ಚಿರುವುದರಿಂದ ನಮ್ಮ ವಸ್ತುಗಳು ಅಲ್ಲಿಗೆ ಹೋಗುವುದು ಕಷ್ಟ ಎಂದು ಹೇಳಿದ್ದಾರೆ. ಭಾರತ ಮತ್ತು ಅವರ ಪ್ರಧಾನಿಯ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಮತದಾನಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ನೀಡಬೇಕೇ?”,ಎಂದು ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.

    ಭಾರತದಲ್ಲಿ ಮತದಾನಕ್ಕಾಗಿ ಗೊತ್ತುಪಡಿಸಿದ 21 ಮಿಲಿಯನ್ ಡಾಲರ್ ನಿಧಿಯನ್ನು ರದ್ದುಗೊಳಿಸುವ ಸರ್ಕಾರಿ ದಕ್ಷತೆ ಇಲಾಖೆ (DOGE) ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. ಬೆಳೆಯುತ್ತಿರುವ ಆರ್ಥಿಕತೆ ಮತ್ತು ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಭಾರತಕ್ಕೆ ಅಂತಹ ಆರ್ಥಿಕ ಬೆಂಬಲದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

   ಭಾರತದಲ್ಲಿ ಮತದಾನವನ್ನು ಪ್ರೋತ್ಸಾಹಿಸುವ ಸಲುವಾಗಿ ಅಮೆರಿಕ ನೀಡುತ್ತಿದ್ದ 182 ಕೋಟಿ (21 ಮಿಲಿಯನ್‌ ಡಾಲರ್‌) ಅನುದಾನವನ್ನು ಟ್ರಂಪ್‌ ಸರ್ಕಾರ ಕಳೆದ ವಾರ ಕಡಿತಗೊಳಿಸಿತ್ತು, ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ (ಡಿಒಜಿಇ) ಉಸ್ತುವಾರಿ ಎಲಾನ್‌ ಮಸ್ಕ್‌ ಅವರು ವೆಚ್ಚ ನಿಯಂತ್ರಣದ ಭಾಗವಾಗಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು. ಕಾರ್ಯದಕ್ಷತಾ ಇಲಾಖೆಯ ನಿರ್ಧಾರವನ್ನು ಟ್ರಂಪ್‌ ಅವರು ಈಗ ಸಮರ್ಥಿಸಿಕೊಂಡಿದ್ದಾರೆ.

Recent Articles

spot_img

Related Stories

Share via
Copy link