ಸುಪ್ರೀಂಕೋರ್ಟ್ ನಲ್ಲಿ ದರ್ಶನ್ ಪರ ವಾದ ಮಾಡ್ತಾರ ಹಿರಿಯ ವಕೀಲ ಕಪಿಲ್ ಸಿಬಲ್ …..?

ಬೆಂಗಳೂರು: 

   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ತಿಂಗಳು ಈ ಅರ್ಜಿಯ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ದರ್ಶನ್‌ ಅವರ ಕಾನೂನು ತಂಡ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರನ್ನು ಸಂಪರ್ಕಿಸಿದೆ ಎನ್ನಲಾಗಿದೆ.

   ಮಾರ್ಚ್ 18ರಂದು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದೆ. ಹೈಕೋರ್ಟ್​ನಲ್ಲಿ ಗೆಲುವು ಪಡೆದಂತೆ ಸುಪ್ರೀಂ ಕೋರ್ಟ್​ನಲ್ಲಿಯೂ ಗೆಲುವು ಪಡೆಯಲು ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

   ದರ್ಶನ್ ಕುಟುಂಬ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿದ್ದು, ಹೈಕೋರ್ಟ್​ನಲ್ಲಿ ನಡೆದ ವಾದ-ಪ್ರತಿವಾದ ಹಾಗೂ ಪ್ರಕರಣದ ಸಮಗ್ರ ಮಾಹಿತಿಯನ್ನು ಅವರಿಗೆ ನೀಡಲಾಗಿದೆ ಎನ್ನಲಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್‌ ಪರ ಹಿರಿಯ ವಕೀಲ ಸಿವಿ ನಾಗೇಶ್‌ ವಾದ ಮಂಡಿಸಿದ್ದರು. 

   ನಟ ದರ್ಶನ್ ಅವರು 131 ದಿನಗಳ ಬಂಧನದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅಕ್ಟೋಬರ್ 30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ನಂತರ ಹೈಕೋರ್ಟ್ ಡಿಸೆಂಬರ್ 13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸಾಮಾನ್ಯ ಜಾಮೀನು ಮಂಜೂರು ಮಾಡಿತ್ತು.

  ಹೈಕೋರ್ಟ್‌ ತೀರ್ಪನ್ನು ಪ್ರಶ್ನೆ ಮಾಡಿ ಡಿಸೆಂಬರ್‌ ಅಂತ್ಯದಲ್ಲಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು. ಸೆಪ್ಟೆಂಬರ್‌ನಲ್ಲಿ ಬೆಂಗಳೂರು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 3,991 ಪುಟಗಳ ಸಮಗ್ರ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

Recent Articles

spot_img

Related Stories

Share via
Copy link