ಮೈಸೂರು:
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಮಾಡಲಾಗುತ್ತಿದೆ.
ಬೇಸಿಗೆ ಆರಂಭವಾಗಿರುವುದರಿಂದ ಕಾಡು ಒಣಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಮಾಡುತ್ತಿದ್ದಾರೆ, ಬೆಂಕಿ ಕೆನ್ನಾಲಿಗೆಗೆ ಗಿಡ-ಮರಗಳು ಸುಟ್ಟು ಕರಕಲಾಗಿವೆ. ಬೆಟ್ಟದ ಸುತ್ತ ನೂರಾರು ಎಕರೆಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಸ್ಥಳದಲ್ಲಿ ಮೂರು ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆ ದೊಡ್ಡಾಗಿ ಹರಡಿದೆ. ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಕೆಲ ಪ್ರವಾಸಿಗರು ಸಹಾಯ ಮಾಡುತ್ತಿದ್ದಾರೆ.
