ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ

ಬೆಂಗಳೂರು :

   ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

   ಎಕ್ಸ್‌ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ, ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ. 

   ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ.

  ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ‘ಮ್ಯಾಜಿಕ್’ ಆಗಿ ಹಣ ಜಮವಾಗುತ್ತದೆ. ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ ಡಿಬಿಟಿ ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ?

  ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ ಡಿಬಿಟಿ ವರ್ಗಾವಣೆ ಖಚಿತಪಡಿಸಬೇಕೆಂದು ಒತ್ತಾಯಿಸಿದ್ದಾರೆ

Recent Articles

spot_img

Related Stories

Share via
Copy link