ಸರ್ಕಾರದ ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ತಲುಪಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು:

   ಸರ್ಕಾರದ ಪಾಪದ ಕೊಡ ತುಂಬಿದ್ದು, ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ತಲುಪಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಬುಧವಾರ ವಾಗ್ದಾಳಿ ನಡೆಸಿದರು.ಕರ್ನಾಟಕ ರಾಜ್ಯ ಗುತ್ತಿಗೆ ಆರೋಗ್ಯ ಕಾರ್ಯಕರ್ತರ ಕಲ್ಯಾಣ ಸಂಘವು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರತಿಭಟನಾ ನಿರತ ಆರೋಗ್ಯ ಕಾರ್ಯಕರ್ತರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದರು.

   ನಾನು ನಿಮ್ಮ ನೋವನ್ನು ಹಂಚಿಕೊಳ್ಳುತ್ತೇನೆ ಮತ್ತು ಈ ಹೋರಾಟದಲ್ಲಿ ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ಘೋಷಿಸಿದರು,ಇದೇ ವೇಳೆ ಗುತ್ತಿಗೆ ಶುಶ್ರೂಷಾಧಿಕಾರಿಗಳ ಕುಂದುಕೊರತೆಗಳನ್ನು ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.ನಿಮ್ಮ ಬೇಡಿಕೆಗಳ ಪಟ್ಟಿ ಮಾಡಿ, ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರ ಗಮನ ಸೆಳೆಯವು ಯತ್ನ ನಡೆಸಲಾಗುವುದು. ನಿಮ್ಮ ಪ್ರತಿನಿಧಿಯಾಗಿ, ಶಾಸಕಾಂಗದಲ್ಲಿ ನಿಮಗಾಗಿ ಹೋರಾಡುತ್ತೇನೆ ಎಂದು ಅವರು ಭರವಸೆ ನೀಡಿದರು.ಬೆಂಗಳೂರು ಗ್ರಾಮೀಣ ಸಂಸದ ಡಾ. ಮಂಜುನಾಥ್ ಅವರಿಂದ ಶುಶ್ರೂಷಾಧಿಕಾರಿಗಳ ಬೇಡಿಕೆಗಳ ಕುರಿತು ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತೇನೆಂದು ಹೇಳಿದರು.

Recent Articles

spot_img

Related Stories

Share via
Copy link