ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: 

  ಗುಲ್ಬರ್ಗ ವಿಶ್ವವಿದ್ಯಾಲಯದ  ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತದ 5 ತಂಡಗಳು ದಾಳಿ  ನಡೆಸಿ, ವಿವಿಧ ದಾಖಲೆಗಳ ಪರಿಶೀಲನೆ ನಡೆಸಿವೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲು ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ, ಅಂಕಪಟ್ಟಿ ನೀಡಲು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 5 ತಂಡಗಳಾಗಿ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ.

   ಗುರುವಾರ ಬೆಳಗ್ಗೆ 10.30 ಗಂಟೆಯ ಸುಮಾರಿಗೆ ಏಕಕಾಲಕ್ಕೆ 5 ತಂಡಗಳಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸಿ, ಹಾಜರಿ ಪುಸ್ತಕ, ಚಲನವಲನ ರಿಜಿಸ್ಟರ್ ಸೇರಿದಂತೆ ಹಲವು ರೀತಿಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿಗಳಾದ ಗೀತಾ ಬೇನಾಳ ಹಾಗೂ ಹನುಮಂತರಾಯ ಹಾಗೂ ಇನ್ಸ್‌ಪೆಕ್ಟರ್ ಸಂತೋಷ್, ಅರುಣ್ ಕುಮಾರ್, ಸಿದ್ದರಾಯ, ರಾಜಶೇಖರ್ ಪಾಲ್ಗೊಂಡಿದ್ದರು.

Recent Articles

spot_img

Related Stories

Share via
Copy link