ಕರ್ನಾಟಕದ ಕರಾವಳಿಯಲ್ಲಿ ತಾಪಮಾನ ಹೆಚ್ಚಳ….!

ಬೆಂಗಳೂರು :

    ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಿನ್ನೆಯಿಂದಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಇವುಗಳಲ್ಲಿ ಕೆಲವೆಡೆ ಮೋಡಕವಿದ ವಾತಾವರಣವಿರಲಿದೆ.

    ಕಾರವಾರ, ಬಾಗಲಕೋಟೆ, ಧಾರವಾಡ, ಗದಗ ಮತ್ತು ಕಲಬುರಗಿ ಬೆಂಗಳೂರು ವಿಮಾನ ನಿಲ್ದಾಣ, ಚಿಂತಾಮಣಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

    ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಬೆಂಗಳೂರಿನ ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್​ನಲ್ಲಿ33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.