ಬೆಂಗಳೂರು:
ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.
ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ RSS ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವುದನ್ನು ಉಲ್ಲೇಖಿಸಿದರು.ತಾಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು.
