ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಕೊಡಗು:

    ವಸತಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ  ಸಾವನ್ನಪ್ಪಿದ್ದಾಳೆ. ಕೊಡಗು  ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಈಕೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ವಿದ್ಯಾರ್ಥಿನಿ ಸಾವಿನ ಬಗ್ಗೆ ಬಂಧುಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

    ವಿದ್ಯಾರ್ಥಿನಿ ಪೂರ್ವಿಕ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರೋಗ್ಯವಾಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಮೃತಪಟ್ಟ ಹಿನ್ನೆಲೆಯಲ್ಲಿ ಪೂರ್ವಿಕ ಸಾವು ಅನುಮಾನ ಮೂಡಿಸಿದೆ. ಶವವನ್ನು ಸದ್ಯ ಶವಾಗಾರದಲ್ಲಿಡಲಾಗಿದೆ. ಘಟನೆ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link