ಯಶ್​ ಬಗ್ಗೆ ಗುಣಗಾನ ಮಾಡಿದ ಹಾಲಿವುಡ್ ತಂತ್ರಜ್ಞ….!

ಬೆಂಗಳೂರು :

     ಟಾಕ್ಸಿಕ್’ ಚಿತ್ರ ಯಾವ ರೀತಿಯಲ್ಲಿ ಸಿದ್ಧವಾಗುತ್ತಿದೆ ಎನ್ನುವ ಮುನ್ಸೂಚನೆ ಸಿಗುತ್ತಲೇ ಇದೆ. ಈ ಚಿತ್ರಕ್ಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಒಟ್ಟಾಗಿ ಶೂಟಿಂಗ್ ಮಾಡಲಾಗುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ. ಈ ರೀತಿ ಕನ್ನಡ ಹಾಗೂ ಇಂಗ್ಲಿಷನ್​ನಲ್ಲಿ ಚಿತ್ರವನ್ನು ಒಟ್ಟಿಗೆ ಶೂಟ್ ಮಾಡುತ್ತಿರುವುದು ಸ್ಯಾಂಡಲ್​ವುಡ್ ಇತಿಹಾಸದಲ್ಲಿ ಇದೇ ಮೊದಲು ಅನ್ನೋದು ವಿಶೇಷ. ಈಗ ಸಿನಿಮಾ ಬಗ್ಗೆ, ಯಶ್   ಬಗ್ಗೆ ಅಮೆರಿಕದ ಸಾಹಸ ನಿರ್ದೇಶಕ ಜೆಜೆ ಪಿರ್ರಿ ಅವರು ಮಾತನಾಡಿದ್ದಾರೆ. ಅವರು ಯಶ್ ಅವರನ್ನು ಹೊಗಳಿದ್ದಾರೆ.

    ಹಾಲಿವುಡ್​ನಲ್ಲಿ ಬೇರೆಯದೇ ಅಲೆ ಸೃಷ್ಟಿಸಿದ ‘ಐರನ್ ಮ್ಯಾನ್’, ‘ಎಕ್ಸ್ ಮ್ಯಾನ್’, ‘ಜಾನ್ ವಿಕ್ 2’ ಸೇರಿ ಹಲವಾರು ಚಿತ್ರಗಳಲ್ಲಿ ಜೆಜೆ ಪೆರ್ರಿ ಅವರು ಕೆಲಸ ಮಾಡಿದ್ದಾರೆ. ಈಗ ‘ಟಾಕ್ಸಿಕ್’ ಸಿನಿಮಾಗೆ ಆಕ್ಷನ್ ದೃಶ್ಯಗಳನ್ನು ಇವರು ಸಂಯೋಜನೆ ಮಾಡಿದ್ದಾರೆ. ಎಲ್ಲಾ ಫೈಟ್​ಗಳು ಭಿನ್ನವಾಗಿ ಇವೆ ಎನ್ನಲಾಗಿದೆ. ಅವರು ಯಶ್ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಅನುಭವ ಹೇಗಿತ್ತು ಎಂಬುದನ್ನು ಇವರು ವಿವರಿಸಿದ್ದಾರೆ. ‘ಟಾಕ್ಸಿಕ್’ ಚಿತ್ರದಲ್ಲಿ ನನ್ನ ಸ್ನೇಹಿತ ಯಶ್ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಭಾರತದಲ್ಲಿ ಇದ್ದಿದ್ದು ಖುಷಿ ಕೊಟ್ಟಿತು. ಯುರೋಪ್​ನ ನನ್ನ ಅನೇಕ ಆತ್ಮೀಯ ಸ್ನೇಹಿತರೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಇದನ್ನು ನೋಡಲು ಕಾದಿದ್ದೇನೆ. ಇದು ನಿಜಕ್ಕೂ ಅದ್ಭುತ. ನಾವು ಏನನ್ನು ಮಾಡಿದ್ದೇವೋ ಆ ಬಗ್ಗೆ ಹೆಮ್ಮೆ ಇದೆ’ ಎಂದಿದ್ದಾರೆ ಅವರು. 

   ‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂನ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಯಶ್ ಜನ್ಮದಿನದ ಪ್ರಯುಕ್ತ ಜನವರಿ 8ರಂದು ಈ ಚಿತ್ರದ ಟೀಸರ್ ರಿಲೀಸ್ ಆಯಿತು. ಇದರಲ್ಲಿ ಹೆಚ್ಚಿನ ಅಂಶವನ್ನು ಬಿಟ್ಟುಕೊಟ್ಟಿಲ್ಲ. ಈ ಸಿನಿಮಾ ಏಪ್ರಿಲ್​ನಲ್ಲಿ ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. 2025ರ ಅಂತ್ಯದ ವೇಳೆಗೆ ಚಿತ್ರ ರಿಲೀಸ್ ಆಗುವ ಸಾಧ್ಯತೆ ಇದೆ.

Recent Articles

spot_img

Related Stories

Share via
Copy link