ಧಾರ್:
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್ ಎರಡು ನಾಲ್ಕು ಚಕ್ರಗಳ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನಿನ್ನೆ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಬದ್ನವರ್-ಉಜ್ಜಯಿನಿ ಹೆದ್ದಾರಿಯ ಬಮನ್ಸುತಾ ಗ್ರಾಮದ ಬಳಿಯ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ತಪ್ಪಾದ ಕಡೆಯಿಂದ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮತ್ತು ಜೀಪ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಧಾರ್ ಎಸ್ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು, ಈ ಸಮಯದಲ್ಲಿ ಕ್ರೇನ್ ಬಳಸಿ ವಾಹನಗಳಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆಯಲಾಯಿತು ಎಂದು ಎಸ್ಪಿ ಹೇಳಿದರು.
ಗಾಯಾಳುಗಳನ್ನು ನೆರೆಯ ರತ್ಲಂ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಯಿತು. ಮೃತಪಟ್ಟವರು ಮತ್ತು ಗಾಯಗೊಂಡವರು ಮಧ್ಯ ಪ್ರದೇಶದ ರತ್ಲಂ, ಮಂಡ್ಸೌರ್ ಮತ್ತು ರಾಜಸ್ಥಾನದ ಜೋಧ್ಪುರ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
