ತಮಿಳುನಾಡು
ಸರ್ಕಾರ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಾ ಬಂದಿದೆ. ಕೇಂದ್ರ ಸರ್ಕಾರವು ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಿಕೆಗೆ ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಆರೋಪಿಸಿದ್ದರು. ಈ ಬಗ್ಗೆ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಮಾತನಾಡಿದ್ದಾರೆ. ‘ಈ ನಾಯಕರು ಹಿಂದಿಯನ್ನು ವಿರೋಧಿಸುತ್ತಾರೆ. ಆದರೆ, ಆರ್ಥಿಕ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡುತ್ತಾರೆ’ ಎಂದು ಟೀಕೆ ಮಾಡಿದ್ದಾರೆ. ಅವರ ಹೇಳಿಕೆ ಸಂಚಲನ ಮೂಡಿಸಿದೆ.
‘ತಮಿಳು ಸೇರಿದಂತೆ ಭಾರತಕ್ಕೆ ಎಲ್ಲಾ ಭಾಷೆಗಳು ಬೇಕು. ಯಾವುದೋ ಎರಡು ಭಾಷೆ ಮಾತ್ರ ಸಾಕಾಗಲ್ಲ. ನಾವು ಭಾಷಾ ವೈವಿಧ್ಯತೆಯನ್ನು ಅಳವಡಿಸಿಕೊಳ್ಳಬೇಕು. ನಮ್ಮ ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ನಮ್ಮ ಜನರಲ್ಲಿ ಪ್ರೀತಿ ಮತ್ತು ಏಕತೆಯನ್ನು ಉತ್ತೇಜಿಸಲು ಭಾಷಾ ವೈವಿಧ್ಯತೆಯ ಅಗತ್ಯವಿದೆ’ ಎಂದಿದ್ದಾರೆ ಅವರು.
