ಕರ್ನಾಟಕ ಬಂದ್: ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು:

    ಕೆಎಸ್ ಆರ್ ಟಿಸಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ ಗೋವಿಂದು ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.

    ಬಳಿಕ ಫ್ರೀಡಂ ಪಾರ್ಕ್ ನಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು. ಬಸ್ ನಿಂದ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದ ವಾಟಾಳ್ ನಾಗರಾಜ್, ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಆದರೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಬಂದ್ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಪೊಲೀಸ್ ರಾಜ್ಯ, ಪೊಲೀಸ್ ಗೂಂಡಾಗಿರಿ ಎಂದು ಆಕ್ರೋಶ ವ್ಯಕ್ತಪಡಿದರು.

   ಟೌನ್ ಹಾಲ್ ಬಳಿ ಮಾತ್ರ ಪ್ರತಿಭಟನೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಸ್ ನಿಂದ ಇಳಿಯುವುದಿಲ್ಲ. ರಾಜ್ಯ ನೆಲ, ಜಲ, ಭಾಷೆ ಪರ ನಮ್ಮ ಹೋರಾಟ ನಿರಂತರವಾದದ್ದು ಎಂದು ಹೇಳಿದರು. ಇದಕ್ಕೂ ಮುನ್ನಾ ವಾಟಾಳ್ ನಾಗರಾಜ್ ಅವರ ಮನೆಯಲ್ಲಿ ಸಭೆ ನಡೆಸಿದ ಮುಖಂಡರು ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೂ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿ ಆಗಿದೆ. ಬಂದ್‌ನ ಬೇಡಿಕೆ ಎಲ್ಲವನ್ನೂ ಜನರ ಮುಂದೆ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದರು.

   ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಕಮಿಷನರ್ ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ. ಭಾಸ್ಕರ್ ರಾವ್ ರೀತಿ ಇವರು ರಾಜಕೀಯಕ್ಕೆ ಬರುತ್ತಾರೋ ಏನೋ ಗೊತ್ತಿಲ್ಲ. ನನಗೂ ನೊಟೀಸ್ ಕೊಟ್ಟಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಹೋರಾಟ ಮಾಡಿ ಅಂದಿದ್ದಾರೆ. ಟೌನ್ ಹಾಲ್‌ನಲ್ಲಿ ಪರ್ಮಿಷನ್ ಇಲ್ಲ ಅಂದಿದ್ದಾರೆ. ಬಂದ್ ಹತ್ತಿಕ್ಕೋ ಕೆಲಸ ಮಾಡಬಾರದಿತ್ತು ಎಂದು ವಾಗ್ದಾಳಿ ನಡೆಸಿದರು. 

   ನಾವು ಮಾಡಿರೋ ಹೋರಾಟದಲ್ಲಿ ಒಂದು ಹನಿ ನೀರು ಸಿಗದ ರೀತಿ ಆಗಬೇಕಿತ್ತು. ಆದರೂ ಯಶಸ್ಸು ಸಿಕ್ಕಿದೆ ಎಂದು ಹೇಳಿದರು. ಹೋಟೆಲ್‌ನವರಿಗೆ ಭಾರಿ ದುರಹಂಕಾರ ಬಂದಿದೆ. ಎಲ್ಲದೂ ಪೊಲೀಸ್ ಕೈಯಲ್ಲೇ ಇದೆ. ತೀರ ಹತ್ತಿಕ್ಕುವ ಮಟ್ಟಕ್ಕೆ ಹೋಗಬಾರದಿತ್ತು. ಆದರೂ ಬಂದ್ ಯಶಸ್ವಿ ಆಗಿದೆ ಎಂದರು.

Recent Articles

spot_img

Related Stories

Share via
Copy link