ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ :ನ್ಯಾಯಾಂಗ ತನಿಖೆಗೆ ಆದೇಶ

ಧಾರವಾಡ:

   ಕಳೆದ ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಲಾಠಿ ಚಾರ್ಜ್ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​, ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

   ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂ ಚನೆ ನೀಡಿದೆ. ಅಲ್ಲದೇ ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದೆ. 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ್ದ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ನಡೆ ಖಂಡಿಸಿ ಬಿಜೆಪಿ ಹಾಗೂ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ನಡೆಸಿದ್ದರು ಮತ್ತು ತಮ್ಮ ಸಮುದಾಯದ ಜನರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳು ಅಮಾನತು ಮಾಡುವಂತೆ ಆಗ್ರಹಿಸಿದ್ದರು.

 

Recent Articles

spot_img

Related Stories

Share via
Copy link