ಕಲಬುರಗಿ: ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರ ಸಾವು

ಕಲಬುರಗಿ

     ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ  ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ  ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಇಂದು ನಸುಕಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

    ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್​​ನಲ್ಲಿದ್ದ  ಒಟ್ಟು 31 ಜನರ ಪೈಕಿ ಐವರು ಸಾವನ್ನಪ್ಪಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ. 

    ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಪತ್ನಿ ಸಾವನ್ನಪ್ಪಿದ್ದು, ಚಿಕಿತ್ಸೆ ಫಲಕಾರಿಯಾಗದೇ ಪತಿ ಕೂಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವಂತಹ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್ ಬಳಿ ದುರಂತ ನಡೆದಿತ್ತು. ದಂಪತಿ ಸ್ಕೂಟಿಯಲ್ಲಿ ಬೆಂಗಳೂರಿಗೆ ತೆರಳುವಾಗ ನಿನ್ನೆ ರಾತ್ರಿ ದುರಂತ ಸಂಭವಿಸಿತ್ತು. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.   

  ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಉಂಟಾಗಿರುವ ಉಬ್ಬು ತಗ್ಗಿನಿಂದ ಅವಘಡ ಸಂಭವಿಸಿತ್ತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ರುದ್ರಾಪುರ ಗ್ರಾಮದ ಪೂರ್ಣಿಮಾ (30) ಮತ್ತು ನವೀನ್ (35) ಮೃತರು. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದರು.

   ಹದಗೆಟ್ಟ ರಸ್ತೆಯಿಂದ ನಿತ್ಯ ಹತ್ತಾರು ವಾಹನ ಅಪಘಾತ ಹಲವರಿಗೆ ಗಾಯಗಳಾಗುತ್ತಿವೆ. ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಕುವಿನಿಂದ ಕತ್ತು ಕೊಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ ಮಾಡಿಕೊಂಡಿರುವತಹ ಘಟನೆ  ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಣಿವೇನಹಳ್ಳಿಯಲ್ಲಿ ನಡೆದಿದೆ. ಹನುಮಂತರಾಯಪ್ಪ(40) ಮೃತ ಮಾನಸಿಕ ಅಸ್ವಸ್ಥ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

   ಕತ್ತುಕೊಯ್ದುಕೊಂಡು ಹನುಮಂತರಾಯಪ್ಪ ಆತ್ಮಹತ್ಯೆಗೆ ಯತ್ನಿಸಿದ್ದ, ಬಳಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕಳೆದ 5-6 ತಿಂಗಳಿನಿಂದ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದರು. ಹಿಂದೆಯೂ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಹೀಗಾಗಿ ಆತ ಹೊರ ಹೋಗದಂತೆ ಕುಟುಂಬಸ್ಥರು ನೋಡಿಕೊಂಡಿದ್ದರು.