ಪಿಎನ್‌ಬಿ ‘ವಂಚನೆ’ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

ಆಂಟ್ವೆರ್ಪ್‌:

     ಪಂಜಾಬ್ ನ್ಯಾಷನಲ್ ಬ್ಯಾಂಕ್  ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು  ಬೆಲ್ಜಿಯಂ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ. ಕೇಂದ್ರ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಸೇರಿದಂತೆ ಭಾರತೀಯ ಸಂಸ್ಥೆಗಳ ಕೋರಿಕೆಯ ಮೇರೆಗೆ ಈ ಬಂಧನವನ್ನು ಮಾಡಲಾಗಿದೆ. ಮುಂಬೈ ನ್ಯಾಯಾಲಯಗಳು ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಿವೆ. ಚೋಕ್ಸಿ ಹಾಗೂ ಆತನ ಪತ್ನಿ ಪ್ರೀತಿ ಚೋಕ್ಸಿಯೊಂದಿಗೆ ‘ರೆಸಿಡೆನ್ಸಿ ಕಾರ್ಡ್ ಪಡೆದ ಬಳಿಕ ಆಂಟ್ವೆರ್ಪ್‌ನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

   ಭಾರತೀಯ ಅಧಿಕಾರಿಗಳು ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಬೆಲ್ಜಿಯಂ ಅಧಿಕಾರಿಗಳನ್ನು ಕೋರಿದ್ದಾರೆ ಎಂದು ವರದಿಯಾಗಿದೆ. ಗೀತಾಂಜಲಿ ಜೆಮ್ಸ್ ಸಂಸ್ಥಾಪಕ, ಪರಾರಿಯಾಗಿರುವ ವಜ್ರದ ವ್ಯಾಪಾರಿ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾದ ಪ್ರಮುಖ ಆರೋಪಿಯಾಗಿದ್ದಾನೆ. 13,500 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತಕ್ಕೆ ಬೇಕಾಗಿದ್ದ ಮೆಹುಲ್ ಚೋಕ್ಸಿ, ಬೆಲ್ಜಿಯಂಗೆ ಸ್ಥಳಾಂತರಗೊಳ್ಳುವ ಮೊದಲು ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದ.

   ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಉಳಿಯಲು ‘ಎಫ್ ರೆಸಿಡೆನ್ಸಿ ಕಾರ್ಡ್’ ಪಡೆದುಕೊಂಡರು. ಆದಾಗ್ಯೂ, ಅವರು ವಾಸಸ್ಥಳ ಪಡೆಯಲು ಮತ್ತು ಭಾರತಕ್ಕೆ ಹಸ್ತಾಂತರಿಸುವುದನ್ನು ತಪ್ಪಿಸಲು ಬೆಲ್ಜಿಯಂ ಅಧಿಕಾರಿಗಳಿಗೆ ಸುಳ್ಳು ದಾಖಲೆಗಳನ್ನು ನೀಡಿದ್ದ ಎಂದು ತಿಳಿದು ಬಂದಿದೆ. ಈ ವಿಷಯದ ಕುರಿತು ಮಾತನಾಡಿದ ಬೆಲ್ಜಿಯಂನ ಫೆಡರಲ್ ಪಬ್ಲಿಕ್ ಸರ್ವಿಸ್ (ಎಫ್‌ಪಿಎಸ್) ವಿದೇಶಾಂಗ ವ್ಯವಹಾರಗಳ ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕಾ ವಕ್ತಾರ ಮತ್ತು ಸೇವಾ ಮುಖ್ಯಸ್ಥ ಡೇವಿಡ್ ಜೋರ್ಡೆನ್ಸ್, ಸರ್ಕಾರವು ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಫೆಡರಲ್ ಪಬ್ಲಿಕ್ ಸರ್ವಿಸ್ (ಎಫ್‌ಪಿಎಸ್) ವಿದೇಶಾಂಗ ಸಚಿವಾಲಯಕ್ಕೆ ಈ ಪ್ರಕರಣದ ಬಗ್ಗೆ ತಿಳಿದಿವೆ ಎಂದು ಹೇಳಿದ್ದಾರೆ. 

   ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ, ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಅನ್ನು ವಂಚನೆಯ ಮೂಲಕ ಅಂಡರ್‌ಟೇಕಿಂಗ್ ಲೆಟರ್‌ಗಳನ್ನು ಪಡೆಯುವ ಮೂಲಕ ವಂಚಿಸಿದ್ದಾರೆ ಎಂಬ ಆರೋಪವನ್ನು ಹೊತ್ತಿದ್ದಾರೆ. ಸದ್ಯ ನೀರವ್ ಮೋದಿ ಲಂಡನ್‌ನಲ್ಲಿ ಜೈಲಿನಲ್ಲಿದ್ದಾರೆ.

Recent Articles

spot_img

Related Stories

Share via
Copy link