ವೀಕೆಂಡ್ ಕಬ್ಬನ್ ಪಾರ್ಕ್​ಗೆ ಹೋಗುವವರಿಗೆ ಟ್ರಾಫಿಕ್ ಪೊಲೀಸರಿಂದ ಗುಡ್ ನ್ಯೂಸ್

ಬೆಂಗಳೂರು

    ವೀಕೆಂಡ್ ಕಬ್ಬನ್ ಪಾರ್ಕ್‌ಗೆ  ಹೋಗುವವರು ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಪಾರ್ಕ್ ಮಾಡಿ ತೆರಳುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಇದನ್ನು ಮನಗಂಡು ಬೆಂಗಳೂರು ಟ್ರಾಫಿಕ್ ಪೊಲೀಸರು , ಉದ್ಯಾನವನಕ್ಕೆ ತೆರಳುವ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಇನ್ನು ಮುಂದೆ ವಾರಾಂತ್ಯದಲ್ಲಿ ಕಬ್ಬನ್ ಪಾರ್ಕ್‌ಗೆ ತೆರಳುವರು ನಿರ್ದಿಷ್ಟ ಪ್ರದೇಶದಲ್ಲಿ ಪಾರ್ಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

   ಕಬ್ಬನ್ ಉದ್ಯಾನವನಕ್ಕೆ ಭೇಟಿ ನೀಡುವವರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಪ್ರೋತ್ಸಾಹಿಸುತ್ತಿದ್ದೇವೆ. ಕಬ್ಬನ್ ಉದ್ಯಾನವನಕ್ಕೆ ಹೋಗುವ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ತಪ್ಪಿಸಬೇಕು ಎಂದು ಸಾರ್ವಜನಿಕರಲ್ಲಿ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
 
    ಮಡಿವಾಳ ಪೊಲೀಸ್ ಠಾಣಾ ಸರಹದ್ದಿನ ಹೊಂಗಸಂದ್ರದಲ್ಲಿ ಊರ ಹಬ್ಬವಿರುವುದರಿಂದ ದೇವರ ಬ್ರಹ್ಮರಥೋತ್ಸವ ಮತ್ತು ಪಲ್ಲಕ್ಕಿ ಉತ್ಸವ ನಡೆಯುವ ಪ್ರಯುಕ್ತ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ತಾತ್ಕಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದು, ಆ ಕುರಿತ ವಿವರವನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.
   ಮತ್ತೊಂದೆಡೆ, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಬಗ್ಗೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಬೆಂಗಳೂರು ಟ್ರಾಫಿಕ್ ಪೊಲೀಸರು ಚುರುಕುಗೊಳಿಸಿದ್ದಾರೆ. ಮಹದೇವಪುರ ವ್ಯಾಪ್ತಿಯ ಕನ್ನಮಂಗಲ ಜಂಕ್ಷನ್ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಗುರುವಾರ ದ್ವಿಚಕ್ರ ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಕುರಿತು ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಕುರಿತು ತಿಳುವಳಿಕೆ ಮೂಡಿಸುವ ಕಾರ್ಯ ಹಮ್ಮಿಕೊಳ್ಳಲಾಯಿತು.

Recent Articles

spot_img

Related Stories

Share via
Copy link