ಸೋಮಶೇಖರ್‌ರವರಿಗೆ ತಿಪ್ಪೇಸ್ವಾಮಿ (ಕೊಟ್ಟಪ್ಪ) ಅಭಿನಂದನೆ…!

ನಾಯಕನಹಟ್ಟಿ :

   ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಸೋಮಶೇಖರ್‌ರವರಿಗೆ ಗಜ್ಜುಗಾನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕರ ಸಂಘದ ಅಧ್ಯಕ್ಷರು ಮತ್ತು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಿಪ್ಪೇಸ್ವಾಮಿ (ಕೊಟ್ಟಪ್ಪ) ಅಭಿನಂದನೆಗಳನ್ನು ಸಲ್ಲಿಸಿದರು.

   ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಾಧ್ಯಕ್ಷರ ಚುನಾವಣೆಯಲ್ಲಿ ಸೋಮಶೇಖರ್ ಗೆದ್ದಿರುವುದು ಬಹಳ ಖುಷಿಯಾಗುತ್ತಿದೆ. ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡಯ್ಯಬೇಕು ಅಧ್ಯಕ್ಷರು, ಸದಸ್ಯರುಗಳು ಒಟ್ಟುಗುಡಿ ಕೆಲಸ ಮಾಡಿ ಎಂದು ತಿಳಿಸಿದರು. ಚುನಾವಣೆಯಲ್ಲಿ ಗೆದ್ದಿದ ಮೇಲೆ ಮನೆಯಲ್ಲಿ ಇರಬೇಡಿ ಜನರ ಕುಂದು ಕೊರತೆಗಳನ್ನು ಆಲಿಸಬೇಕು, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮಗಳ ಅಭಿವೃದ್ಧಿ ಪಡಿಸಲಿ ಎಂದು ಶುಭ ಆರೈಸಿದರು.