ಬೆಂಗಳೂರು:
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ಮೇ 2ರಂದು ಫಲಿತಾಂಶ ಪ್ರಕಟಿಸಲಿದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ.
ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೂಸೂತ್ರವಾಗಿ ನಡೆದಿತ್ತು. ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಹೆಚ್ಚಿನ ಪ್ರಮಾಣದ ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ವೀಕ್ಷಿಸುವುದು ಹೇಗೆ?
- ಫಲಿತಾಂಶಕ್ಕಾಗಿ ಸರ್ಕಾರದ ಅಧಿಕೃತ ವೆಬ್‌ಸೈಟ್ https://karresults.nic.in/ ನಲ್ಲಿ ಭೇಟಿ ನೀಡಿ.
- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.
- ನಂತರ ನಿಮ್ಮ ಪರೀಕ್ಷಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಸೇರಿ ಅಗತ್ಯ ಮಾಹಿತಿ ದಾಖಲಿಸಬೇಕು.
- ನಂತರ ಅಂಕಟ್ಟಿ ತೆರೆದುಕೊಳ್ಳಲಿದ್ದು, ಡೌನ್‌ಲೋಡ್ ಮಾಡಿಕೊಳ್ಳಬಹುದು.
