ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಿ: ಶಿವಾನಂದ್ ಪಾಟೀಲ್’ಗೆ ಯತ್ನಾಳ್ ಸವಾಲು

ಬೆಂಗಳೂರು:

   ನಿಜಕ್ಕೂ ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಲಿ ಎಂದು ಸಚಿವ ಶಿವಾನಂದ ಪಾಟೀಲ್ ಅವರಿಗೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಸವಾಲು ಹಾಕಿದ್ದಾರೆ.

   ಶಿವಾನಂದ ಪಾಟೀಲ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಶಿವಾನಂದ ಪಾಟೀಲ್ ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು, ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

    ಉತ್ತರನ ಪೌರುಷ ಒಲೆಯ ಮುಂದೆ ಎಂಬಂತಿದೆ. ರಾಜೀನಾಮೆ ಅಂಗೀಕಾರ ಆಗೋದಿಲ್ಲ ಅಂತ ಗೊತ್ತಿದ್ದರೂ ಪುಕ್ಕಟೆ ಪ್ರಚಾರಕ್ಕೆ ರಾಜೀನಾಮೆ ಕೊಟ್ಟು ರಾಜೀನಾಮೆಯನ್ನು ತಿರಸ್ಕೃತವಾಗುವಂತ ಪ್ರಭೃತಿಗಳು ಇದ್ದಾರೆ ಎಂಬುದೇ ಸೋಜಿಗದ ಸಂಗತಿ. ಶಾಸಕರು ರಾಜೀನಾಮೆ ಕೊಡುವುದಕ್ಕೆ ರೀತಿ ರಿವಾಜು ಇರುತ್ತೆ ಎಂಬುದು ಇವರಿಗೆ ಗೊತ್ತಿಲ್ಲವೇ.

   ಇವರು ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು. ಸಭಾಧ್ಯಕ್ಷರಾದ ಖಾದರ್ ಅವರು ಈ ರೀತಿಯಾದ ರಾಜೀನಾಮೆ ಸ್ವೀಕೃತವಾಗುವುದಿಲ್ಲ ಎಂಬುದನ್ನು ಅವರಿಗೆ ತಿಳಿಸಬೇಕಾಗಿತ್ತು. ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದವಾಗಿದೆ.

   ರಾಜೀನಾಮೆ ಸರಿಯಾದ ವಿಧಾನದಲ್ಲಿಲ್ಲ ಎಂದು ಸ್ವೀಕರಿಸುವ ವೇಳೆಯಲ್ಲೇ ಖಾದರ್ ಅವರು ಹೇಳಬೇಕಾಗಿತ್ತು. ನೀವು ಮಾಡುತ್ತಿರುವ ನಾಟಕವನ್ನು ಪ್ರಜ್ಞಾವಂತ ಮತದಾರರು, ಕ್ಷೇತ್ರದ ಜನತೆ ಗಮನಿಸಿ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎಂಬುದನ್ನು ಮರೆಯದಿರಿ. ಇವರಿಗೆ ನಿಜಕ್ಕೂ ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಲಿ ಎಂದು ಸವಾಲು ಹಾಕಿದರು.

Recent Articles

spot_img

Related Stories

Share via
Copy link