ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿಯಲ್ಲಿ ದುರ್ಘಟನೆ ನಡೆದಿದೆ. ಯಂಟಾಗನಹಳ್ಳಿ ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಶ್ರೀನಿವಾಸ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಮೃತರು ಶಾಂತಿನಗರ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








