ಮೇ 18ರಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಶಿವಮೊಗ್ಗ: 

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಮತ್ತು ಜಿಲ್ಲಾ ಶಾಖೆ ಇವರ ಸಹಯೋಗದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಮೇ ೧೮, ೧೯ ಹಾಗೂ ೨೦ರಂದು ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.

   ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಮೇ ೧೮ರಂದು ಎನ್‌ಇಎಸ್ ಗ್ರೌಂಡ್‌ನಲ್ಲಿ ಬೆಳಿಗ್ಗೆ 9 ಗಂಟೆಯಿಂದ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಆನ್‌ಲೈನ್ ಮೂಲಕವೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 142 ಸ್ಪರ್ಧೆಗಳು ನಡೆಯಲಿದ್ದು, 15 ರಿಂದ 16 ಸಾವಿರ ನೌಕರರು ಈ ಸ್ಪರ್ಧೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದರು.

   97 ವೈಯಕ್ತಿಕ, 16 ತಂಡಗಳ ಸ್ಪರ್ಧೆ, 97 ವೈಯಕ್ತಿಕ ಜಾನಪದ ಸ್ಪರ್ಧೆ ನಡೆಯಲಿದ್ದು ಒಟ್ಟು 280 ಸ್ಪರ್ಧೆಗಳು ನಡೆಯಲಿದೆ ಎಂದರು. 18 ನಾಟಕಗಳ ಪ್ರದರ್ಶನ ಎರಡು ದಿನಗಳ ವರೆಗೆ ನಡೆಯಲಿದೆ, 40 ಬಸ್‌ಗಳು ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿಸಿಎಂ, ಅಲ್ಪಸಂಖ್ಯಾತರ ಹಾಸ್ಟೆಲ್‌ಗಳು ಸೇರಿ ಹಲವೆಡೆ ವಸತಿ ವ್ಯವಸ್ಥೆ ಮಾಡಲಾಗಿದೆ. 2-2.5 ಕೋಟಿ ರೂ. ಹಣ ಕಳೆದ ಬಾರಿ ಖರ್ಚಾಗಿತ್ತು. ಈ ಬಾರಿಯೂ ರಾಜ್ಯ ಸರ್ಕಾರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಹಣ ನೀಡಲಿದೆ ಎಂದರು.

Recent Articles

spot_img

Related Stories

Share via
Copy link