ಶಿವಮೊಗ್ಗ:
ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆ ಆರೋಪಿ ಮಂಜುನಾಥ್ ಅಲಿಯಾಸ್ ಚಳಿ ಮಂಜ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಮೇ 9ರಂದು ಹೇಮಣ್ಣ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಆರೋಪಿ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆಹೊನ್ನೂರು ಪಿಐ ಲಕ್ಷ್ಮಿಪತಿ ಆರೋಪಿ ಮಂಜನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಈ ಘಟನೆಯಲ್ಲಿ ಕಾನ್ಸ್ಟೇಬಲ್ ಪಿಸಿ ಪ್ರಕಾಶ್ ಅವರಿಗೆ ಗಾಯಗಳಾಗಿದೆ. ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಆತನ ಕಾಲಿಗೆ ಫೈರಿಂಗ್ ನಡೆಸಿ ಬಂಧಿಸಲಾಗಿದೆ.
