ನಾಯಕನಹಟ್ಟಿ
ರಾಜ್ಯದ ಜನತೆಗೆ ಪಂಚ ಗ್ಯಾರೆಂಟಿಯಿAದ ತುಂಬಾ ಅನುಕೂಲವಾಗಿದೆ ಕೊಟ್ಟ ಮಾತಿನಂತೆ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕಾಂಗ್ರೆಸ್ ಮುಖಂಡರಾದ ಆರ್.ಶ್ರೀಕಾಂತ್ ಹೇಳಿದ್ದಾರೆ.
ಪಟ್ಟಣದ ಬುಧವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಎನ್.ವೈ.ಗೋಪಾಲಕೃಷ್ಣ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಶಕ್ತಿ ಯೋಜನೆ ಹಾಗೂ ಪ್ರತಿ ತಿಂಗಳು ಗೃಹಲಕ್ಷಿ ರೂ.2೦೦೦, ಯುವನಿಧಿ, ಬಡವರಿಗೆ ಗೃಹಜ್ಯೋತಿ ಮತ್ತು ಅನ್ನಭಾಗ್ಯ ನೀಡುತ್ತಿರುವುದರಿಂದ ರಾಜ್ಯದ ಜನತೆ ನೆಮ್ಮದಿಯಾಗಿ ಜೀವಿಸುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಮಹಿಳೆಯರ ಪರವಾಗಿ ಐತಿಹಾಸಿಕ ಯೋಜನೆಗಳನ್ನು ತಂದು ಇತಿಹಾಸ ನಿರ್ಮಾಣ ಮಾಡಿರುವುದು ಕಾಂಗ್ರೆಸ್ ಪಕ್ಷ ೫ ಗ್ಯಾರೆಂಟಿಗಳು ಬಡವರ ಬದುಕಿಗೆ ಬೆಳಕಾಗಿದೆ ಎಂದು ಅವರು ಮಾತನಾಡಿದರು.
