ಬೆಂಗಳೂರು:
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ಜೂನ್ 2ರಂದು ಯೆಲ್ಲೋ ಅಲರ್ಟ್ ನೀಡಿರುವುದರಿಂದ ಬಿರುಸಿನ ಮಳೆಯಾಗುವ ಸಂಭವವಿದೆ. ಇನ್ನು ಸೋಮವಾರ (ಜೂ.2) ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹೆಚ್ಚಾಗಿ ಶುಷ್ಕ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 20°C ಇರುವ ಸಾಧ್ಯತೆ ಇದೆ.
ಜೂ. 3ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಹಗುರ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಜೂ. 4ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಜೂ.5 ಮತ್ತು 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
