ಅಹಮದಾಬಾದ್:
ಪ್ರತಿ ಐಪಿಎಲ್ ಪಂದ್ಯದ ಪ್ರಾರಂಭದಲ್ಲಿ ಘೋಷವಾಕ್ಯದಂತೆ ಕೇಳಿಸುತ್ತಿದ್ದ ಈ ಸಲ ಕಪ್ ನಮ್ದೇ ಎಂಬ ಸಾಲಿಗೆ ಹದಿನೆಂಟು ವರ್ಷಗಳ ಕಾಯುವುದಕ್ಕೆ ಹಾಗೂ ಕ್ರಿಕೆಟ್ ಪ್ರೇಮಿಗಳ ಅಚಲ ಬದ್ಧತೆ ಗೆ ಇಂದು ಇಂದು ಪ್ರತಿಫಲ ಸಿಕ್ಕಂತಾಗಿದೆ ಅದೇನೆಂದರೆ ನಮ್ಮ ಬೆಂಗಳೂರು ಐಪಿಎಲ್ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಪಂಜಾಬ್ ತಂಡವನ್ನು ಮಣಸುವ ಮೂಲಕ. ಪ್ರಶಸ್ತಿ ಮುಡಿಗೇರಿಸಿದೆ.
2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ರಜತ್ ಪಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಚೊಚ್ಚಲ ಚಾಂಪಿಯನ್ ಆಗಿದೆ.
ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಆರ್‌ಸಿಬಿ ತಂಡ, ಫೈನಲ್ ಹಣಾಹಣಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ (PBKS) ವಿರುದ್ಧ 6 ರನ್‌ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ ವಿಶ್ವದಾದ್ಯಂತ ಆರ್‌ಸಿಬಿ ಅಭಿಮಾನಿಗಳ ಕಪ್ ಗೆಲ್ಲುವ ಪ್ರಾರ್ಥನೆ ಈಡೇರಿತು.
ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರ್‌ಸಿಬಿ ನೀಡಿದ್ದ 191 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಪಂಜಾಬ್ ಕಿಂಗ್ಸ್ ತಂಡ, ಶಶಾಂಕ್ ಸಿಂಗ್ ಏಕಾಂಗಿ ಹೋರಾಟದ ಹೊರತಾಗಿಯೂ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 184 ರನ್‌ಗಳಿಗೆ ಸೀಮಿತವಾಯಿತು. ಆ ಮೂಲಕ ಕೇವಲ 6 ರನ್‌ಗಳಿಂದ ಪಂಜಾಬ್ ಕಿಂಗ್ಸ್ ಸೋಲು ಒಪ್ಪಿಕೊಂಡಿತು.
