ಚಿಕ್ಕೋಡಿ:
ನಮ್ಮ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಇದರಿಂದ ಮನಸ್ಸಿಗೆ ಸಾಕಷ್ಟು ನೋವಾಗಿದ್ದು, ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಮಾತನಾಡಿ ಬಿ. ಆರ್. ಪಾಟೀಲ್ ಹೇಳಿದ್ದಕ್ಕಿಂತ ನನ್ನ ಪರಸ್ಥಿತಿ ಹೆಚ್ಚಾಗಿದೆ, ಹೇಳಬೇಕಂದರೆ ಅದರ ಅಪ್ಪನ ಹಾಗೆ ನನ್ನ ಪರಿಸ್ಥಿತಿ ಆಗಿದೆ, ಶಾಸಕ ಪಾಟೀಲ್ ಹೇಳಿದ್ದು ಸುಳ್ಳಲ್ಲಾ, ನಿಜವೇ ಆಗಿದೆ, ಬಿ.ಆರ್. ಪಾಟೀಲ್ ಹೇಳಿದ್ದು, ಸರಿಯಾಗಿಯೇ ಇದೆ. ಎರಡೆರಡು ವರ್ಷ ಆದ್ರೂ, ವರ್ಕ್ ಆರ್ಡರ್ ನೀಡುತ್ತಿಲ್ಲ ಎಂದರೆ ಅರ್ಥ ಏನು? ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ.
ಮುಖ್ಯಮಂತ್ರಿ ಅವರ ವಿಶೇಷ ಅನುದಾನ ಬಂದಿದೆ. 25 ಕೋಟಿ ಅನುದಾನ ಕೊಟ್ಟಿದ್ದಾರೆ ಎರಡು ವರ್ಷ ಆದ್ರು ಇದುವರೆಗೂ ವರ್ಕ್ ಆರ್ಡರ್ ಕೊಟ್ಟಿಲ್ಲ. ನಮ್ಮ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಎರಡು ದಿನದಲ್ಲಿ ಮುಖ್ಯಮಂತ್ರಿಗೆ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ, ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ. ಸ್ವ ಪಕ್ಷದ ವಿರುದ್ಧ ಹರಿಹಾಯ್ದ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆಯವರು ತಮ್ಮ ಕ್ಷೇತ್ರಕ್ಕೆ ನೀಡಬೇಕಾಗಿದ್ದ ಅನುದಾನದ ವಿಷಯವಾಗಿ ರಾಜು ಕಾಗೆ ಅವರು ತಮ್ಮದೆ ಸರ್ಕಾರದ ವಿರುದ್ಧ ಆರೋಪ ಮಾಡಿದ್ದು, ರಾಜೀನಾಮೆ ನೀಡುವುದಾಗಿ ಆಕ್ರೋಶ ಹೊರಹಾಕಿದ್ದಾರೆ








