ಬಿಬಿಎಂಪಿ ಇಂಜಿನಿಯರ್‌ಗಳ ಮನೆಗಳಿಗೆ ಲೋಕಾಯುಕ್ತ ದಾಳಿ…..!

ಬೆಂಗಳೂರು :

    ಬೆಂಗಳೂರಿನಲ್ಲಿ  ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು  ಭ್ರಷ್ಟ ಅಧಿಕಾರಿಗಳಿಗೆ  ಶಾಕ್‌ ನೀಡಿದ್ದಾರೆ. ಹಲವು ಕಡೆ ಲೋಕಾಯುಕ್ತ ತಂಡಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ  ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಕಚೇರಿ, ನಿವಾಸ ಸೇರಿದಂತೆ ನಗರದ ಒಟ್ಟು ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಿಂದರಾಜನಗರ ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್, ನಾಗರಬಾವಿ, ಗೋವಿಂದರಾಜನಗರ, ಯಲಹಂಕ ಭಾಗದಲ್ಲಿ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.

Recent Articles

spot_img

Related Stories

Share via
Copy link