ಬೆಂಗಳೂರು :
ನಕಲಿ ದಾಖಲಾತಿ, ಅನುದಾನ ದುರ್ಬಳಕೆ ತಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ‘ಇ–ಹಾಜರಾತಿ’ ಕಡ್ಡಾಯಗೊಳಿಸಿ ಆದೇಶಿಸಿದೆ.
ಬಜೆಟ್ನಲ್ಲಿ ಘೋಷಿಸಿದಂತೆ ಮಕ್ಕಳ ಮುಖಚರ್ಯೆ ಗುರುತಿಸುವ ಮೂಲಕ ಇ–ಹಾಜರಾತಿ ದಾಖಲಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಹಾಗೂ ಇತರೆ ಪರಿಕರಗಳನ್ನು ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.








