ಸೂರ್ಯಕುಮಾರ್‌ ಯಾದವ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ನವದೆಹಲಿ:

     ಭಾರತ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್  ಅವರು ಜರ್ಮನಿಯಲ್ಲಿ ‘ಸ್ಪೋರ್ಟ್ಸ್ ಹರ್ನಿಯಾ’  ಸಂಬಂಧಿತ ನೋವಿನ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾದರು. ಚಿಕಿತ್ಸೆಗಾಗಿ ತಜ್ಞರನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಸೂರ್ಯ ಇತ್ತೀಗೆಚೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ವೈದ್ಯರು ಶಸ್ತ್ರಚಿಕಿತ್ಸೆ(Suryakumar Yadav surgery) ಅಗತ್ಯವೆಂದು ಸೂಚಿಸಿದ್ದರು. ಇದೀಗ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸಾಧ್ಯವಾದಷ್ಟು ಬೇಗ ಟೀಮ್‌ ಇಂಡಿಯಾಕ್ಕೆ ಮರಳುವ ವಿಶ್ವಾಸ ಅವರದಾಗಿದೆ.

    ಶಸ್ತ್ರಚಿಕಿತ್ಸೆಗೆ ಒಳಗಾದ ಫೋಟೊವನ್ನು ಸೂರ್ಯಕುಮಾರ್‌ ಯಾದವ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ʼಎಲ್ಲರಿಗೂ ಹಾಯ್‌. ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾದೆ. ಇದನ್ನು ಯಶಸ್ವಿಗೊಳಿಸಿದ ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬಂದಿಗೆ ಧನ್ಯವಾದಗಳು. ಸಾಧ್ಯವಾದಷ್ಟು ಬೇಗ ತಂಡವನ್ನು ಕೂಡಿಕೊಳ್ಳುವ ವಿಶ್ವಾಸ ನನ್ನದು ಎಂದು ಹೇಳಿಕೊಂಡಿದ್ದಾರೆ.

   ಇಂಗ್ಲೆಂಡ್‌ ಟೆಸ್ಟ್‌ ಸರಣಿ ಬಳಿಕ ಭಾರತ ತಂಡ ಆಗಸ್ಟ್ 17 ರಿಂದ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ ಅವರು ಚೇತರಿಕೆಯ ಹಾದಿಯಲ್ಲಿದರೂ ಕೂಡ ಅವರು ಯಾವಾಗ ಭಾರತ ತಂಡಕ್ಕೆ ಮರಳುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ಅವರು ಬಾಂಗ್ಲಾದೇಶ ಸರಣಿಗೆ ಲಭ್ಯವಾಗುದು ಅನುಮಾನ. ಮಹತ್ವದ ಸರಣಿ ಇಲ್ಲದ ಕಾರಣ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಸೂರ್ಯಕುಮಾರ್ ಗುಣಮುಖರಾಗಲು ಬೇಕಾದಷ್ಟು ಸಮಯ ಸಿಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

   2025ನೇ ಸಾಲಿನ ಐಪಿಎಲ್‌ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಸೂರ್ಯಕುಮಾರ್ ಯಾದವ್, 700ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಗಮನಾರ್ಹ ಪ್ರದರ್ಶನ ನೀಡಿದ್ದರು. ಇದಾದ ಬಳಿಕ ಮುಂಬೈ ಟಿ20 ಲೀಗ್‌ನಲ್ಲಿಯೂ ಅಬ್ಬರಿಸಿದ್ದರು. ಇದೇ ಟೂರ್ನಿ ವೇಳೆ ಅವರು ಗಾಯಕ್ಕೆ ತುತ್ತಾದರು ಎನ್ನಲಾಗಿದೆ.

Recent Articles

spot_img

Related Stories

Share via
Copy link