ಕನ್ನಡಿಗರ ಬಹುದಿನಗಳ ಕನಸು ಈಡೇರಿಸಿದ ಕೇಂದ್ರ ಸರ್ಕಾರ

ಬೆಂಗಳೂರು:

    ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ “Poly trauma centre” ಸ್ಥಾಪನೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆ ಅನುಮೋದನೆ ನೀಡಿರುವುದು ವೈಯುಕ್ತಿಕವಾಗಿ ಅತ್ಯಂತ ಸಂತಸ ತರಿಸಿದೆ. ಈ ಮೂಲಕ ಅನೇಕ ವರ್ಷಗಳ ಕನ್ನಡಿಗರ ಬೇಡಿಕೆ ಈಡೇರಿದಂತಾಗಿದೆ ಎಂದು ಬಿಜೆಪಿ ಸಂಸದ ಡಾ. ಮಂಜುನಾಥ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಅಣದಲ್ಲಿ ಪೋಸ್ಟ್‌ ಮಾಡಿ ಈ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಹಣಕಾಸು ಸಚಿವರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಮತ್ತು ವೈಯುಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿರುತ್ತೇನೆ.

    ಪ್ರಸ್ತುತ ನಮ್ಮ ದೇಶದಲ್ಲಿ ಶೇ 15 % ರಷ್ಟು ಸಾವುಗಳು ರಸ್ತೆ ಅಪಘಾತದಿಂದ ಸಂಭವಿಸುತ್ತಿವೆ ಮತ್ತು ಶೇ 30 ರಷ್ಟು ರಸ್ತೆ ಅಪಘಾತಗಳಲ್ಲಿ ಬಹುಗಾಯಗಳಿಗೆ  ಒಳಗಾಗುತ್ತಾರೆ. ಈ ಹಿನ್ನಲೆ ಗಾಯಗೊಂಡವರಿಗೆ ಆದಷ್ಟು ತ್ವರಿತವಾಗಿ  ಒಂದೇ ಸೂರಿನಡಿ ಚಿಕಿತ್ಸೆ ಒದಗಿಸುವ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕದ ಜನತೆಗೆ ವಿಶೇಷವಾಗಿ ಬೆಂಗಳೂರಿಗರಿಗೆ “Poly trauma centre” ಸ್ಥಾಪನೆ ಅತ್ಯಂತ ಸಹಕಾರಿಯಾಗಲಿದೆ.

   ಜಯಪ್ರಕಾಶ್ ನಾರಾಯಣ್ “Poly trauma centre” ನಂತರದಲ್ಲಿ ದೇಶದಲ್ಲಿಯೇ ಎರಡನೇ “Poly trauma centre” ಇದಾಗಲಿದೆ. ಇದರ ಜೊತೆಗೆ ಸ್ನಾತಕೋತ್ತರ ಪದವಿ ಘಟಕವನ್ನು ಸ್ಥಾಪಿಸುವುದರಿಂದ ಆಘಾತ ಚಿಕಿತ್ಸಾ ವಿಭಾಗದಲ್ಲಿ ತಜ್ಞರಿಗೆ ನುರಿತ ತರಬೇತಿ ನೀಡುವ ಮೂಲಕ ಅವರ ಸೇವೆಯನ್ನು ದೇಶಾದ್ಯಂತ ಬಳಸಿಕೊಳ್ಳಬಹುದಾಗಿದೆ.

   ನಮ್ಮೆಲ್ಲರ ಮನವಿಗೆ ಸ್ಪಂದಿಸಿ ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ “Poly centre” ಸ್ಥಾಪನೆಯ ಪ್ರಸ್ತಾವನೆಗೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಹಣಕಾಸು ಸಚಿವೇ ನಿರ್ಮಲಾ ಸೀತಾರಾಮನ್‌ ಅವರಿಗೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕರ್ನಾಟಕ ಜನತೆಯ ಪರವಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ.

Recent Articles

spot_img

Related Stories

Share via
Copy link