ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಬೆಂಗಳೂರು:

    ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.

   ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ರೋಗಿಗಳನ್ನ ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ.

   ಡ್ಯೂಟಿ ಡಾಕ್ಟರ್ ದಿವ್ಯಾ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ 3:30ರ ಸುಮಾರಿಗೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

   ಅಲ್ಲದೇ ಸೂಪರಿಂಟೆಂಡೆಂಟ್‌ಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಕಿ ನಂದಿಸೋ ಪ್ರಯತ್ನದ ಜೊತೆಗೆ ಹಿರಿಯ ಅಧಿಕಾರಿಗಳಿಗೂ ದಿವ್ಯಾ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸುಮಾರು 30 ನಿಮಿಷದಲ್ಲಿ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಐಸಿಯುನಲ್ಲಿದ್ದವರು ಸೇರಿ ಎಲ್ಲರನ್ನೂ ಶಿಫ್ಟ್ ಮಾಡಲಾಗಿದೆ

Recent Articles

spot_img

Related Stories

Share via
Copy link