ಹಾಸನ :ಹೃದಯಾಘತಕ್ಕೆ ಮತ್ತೊರ್ವ ಯುವಕ ಸಾವು….!

ಹಾಸನ:

     ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳ  ಸಂಖ್ಯೆ ಹೆಚ್ಚಳವಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸುತ್ತಿರುವ ಬೆನ್ನಲ್ಲೇ ಮತ್ತೊರ್ವ ಯುವಕ ಹೃದಯಾಘಾತದಿಂದ ಅಸುನೀಗಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

    ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿರುವ ಮದನ್‌, ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಾಗಿದ್ದರು. 2 ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದ ಈ ವೇಳೆ ನಿನ್ನೆ ರಾತ್ರಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. 

    ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

   ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಅವರು, ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

   ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ. ಆತುರಾತುರದಲ್ಲಿ ಕರೋನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು. ಕಾರಣ ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

Recent Articles

spot_img

Related Stories

Share via
Copy link