ಬೆಂಗಳೂರು, ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: 2 ಸಾವು

ಚಿತ್ರದುರ್ಗ: 

     ರಾಜಧಾನಿ ಬೆಂಗಳೂರು  ಹಾಗೂ ಚಿತ್ರದುರ್ಗದಲ್ಲಿ  ಎರಡು ಪ್ರತ್ಯೇಕ ಅಪಘಾತಗಳು  ಇಂದು ಸಂಭವಿಸಿ ಇಬ್ಬರು  ಮೃತಪಟ್ಟಿದ್ದಾರೆ. ಎರಡೂ ಘಟನೆಗಳಲ್ಲಿ ಬೈಕ್‌ ಹಾಗೂ ಬಸ್ಸು ಡಿಕ್ಕಿಯಾಗಿದ್ದು, ಬೈಕ್‌ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್‌ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ನಡೆದಿದೆ.

   ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ನಸುಕಿನ ಜಾವ 4 ಗಂಟೆಗೆ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೊಹಮ್ಮದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ಸಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ಮಹಮ್ಮದ್ ಅಜರ್ ಸಾವನ್ನಪ್ಪಿದ್ದಾರೆ. ಮೊಹಮ್ಮದ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಅಪಘಾತದ ಕುರಿತು ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link