ನವದೆಹಲಿ:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಘನಘೋರ ಘಟನೆಯೊಂದು ವರದಿಯಾಗಿದೆ. ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ಬೆಳಿಗ್ಗೆ 7:05 ಕ್ಕೆ ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನೆಯ ಕಾರಣ ಇನ್ನೂ ತಿಳಿದುಬಂದಿಲ್ಲ.
“ಬೆಳಿಗ್ಗೆ 7 ಗಂಟೆಗೆ ಕಟ್ಟಡ ಕುಸಿತದ ಬಗ್ಗೆ ನಮಗೆ ಕರೆ ಬಂದಿದೆ. ಏಳು ಅಗ್ನಿಶಾಮಕ ದಳಗಳು ಸೇರಿದಂತೆ ಬಹು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ” ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ನಾಲ್ಕು ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದ್ದು, ಕನಿಷ್ಠ ಮೂವರು ಇನ್ನೂ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಏಪ್ರಿಲ್ ಆರಂಭದಲ್ಲಿ, ದೆಹಲಿಯ ಮುಸ್ತಾಬಾದ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ನಾಲ್ವರು ಜನರು ಸಾವನ್ನಪ್ಪಿದರು ಮತ್ತು 13 ಜನರನ್ನು ರಕ್ಷಿಸಲಾಗಿತ್ತು.








