ಬೆಂಗಳೂರು:
ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸರು ಹಾಜ ಮೊಯಿನುದ್ದಿನ್ ಎಂಬಾತನನ್ನು ಬಂಧಿಸಿದ್ದಾರೆ. ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್, ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ.
ಕಳೆದ ಮಂಗಳವಾರ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ- ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ತೆರಳಿದ್ದರು. ಇದನ್ನು ಗಮನಿಸಿದ ಕಾಮುಕ ಮೊಯಿನುದ್ದಿನ್ ಕಿಟಕಿ ಮೂಲಕ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ. ಈ ವೇಳೆ ಈತ ವಿಡಿಯೋ ಮಾಡುವುದನ್ನು ಮಗಳು ಗಮನಿಸಿದ್ದಾಳೆ. ಬಳಿಕ ಹೊರಗೆ ಬಂದು ತಂದೆಗೆ ಹೇಳಿದ್ದಾಳೆ. ತಂದೆ ಹೋಗಿ ನೋಡುವಷ್ಟರಲ್ಲಿ ಕಾಮುಕ ಅಲ್ಲಿಂದ ಎಸ್ಕೇಪ್ ಆಗಿದ್ದ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.








