ಬೆಂಗಳೂರು:
ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ಸಿಸಿಟಿವಿ ಕಣ್ಗಾವಲು ಇರಲಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ CCTV ಅಳವಡಿಕೆಗೆ ಸರ್ಕಾರ ಆದೇಶ ಮಾಡಿದೆ.
ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್, ಡ್ರಗ್ಸ್ ಚಟುವಟಿಕೆಗಳು, ಲೈಂಗಿಕ ಕಿರುಕುಳ ಪ್ರಕರಣಗಳು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಮಾಡಿದೆ.
