ನವದೆಹಲಿ:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನಿನ ವಿರುದ್ಧ ಕರ್ನಾಟಕ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿದೆ.
ನಟ ದರ್ಶನ್ ಸೇರಿದಂತೆ ಒಟ್ಟು 7 ಮಂದಿಗೆ ನೀಡಿದ್ದ ಹೈಕೋರ್ಟ್‌ನ ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಕೋರಿತ್ತು. ಕಳೆದ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರ ಗೌಡ, ಪ್ರದೂಶ್, ಜಗದೀಶ್, ಲಕ್ಷ್ಮಣ್, ಅನುಕುಮಾರ್ ಹಾಗೂ ನಾಗರಾಜುಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.
ಈ ವೇಳೆ, ಬಂಧನದ ಕಾರಣಗಳನ್ನಷ್ಟೇ ನಾವು ಕೇಳುತ್ತಿದ್ದೇವೆ. ಬೇರೆ ಕೇಳುತ್ತಿಲ್ಲ. ಬಂಧನ ಕಾನೂನುಬದ್ಧವಾಗಿಲ್ಲ ಎನ್ನುವುದಾಗಿದೆ, ಇದಕ್ಕೆ ಉತ್ತರ ಕೊಡಿ ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಬಳಿಕ ವಿಚಾರಣೆಯನ್ನು ಜುಲೈ 22ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.
2024ರ ಜೂ.8ರಂದು ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧನವಾಗಿ 6 ತಿಂಗಳ ಬಳಿಕ, 2024ರ ಡಿ.13 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇ 21ರಂದು ನ್ಯಾಯಮೂರ್ತಿ ಪಾರ್ದೀವಾಲ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಜು. 17ಕ್ಕೆ ಮುಂದೂಡಿತ್ತು. ಈ ನಡುವೆ ದರ್ಶನ್, ವಿಶೇಷ ಅನುಮತಿ ಪಡೆದು ವಿದೇಶಕ್ಕೆ ತೆರಳಿ ತಮ್ಮ ಚಿತ್ರಗಳ ಶೂಟಿಂಗ್‌ನಲ್ಲಿ ತೊಡಗಿದ್ದಾರೆ. ಜಾಮೀನಿಗೆ ಅವರು ಬೆನ್ನು ನೋವಿನ ಆಪರೇಶನ್‌ನ ಕಾರಣ ನೀಡಿದ್ದರು.