ಅಕ್ಟೋಬರ್‌ನಿಂದ ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ

ಬೆಂಗಳೂರು:

   ಅಕ್ಟೋಬರ್‌ನಿಂದ ರಾಜ್ಯದ ಅಂಗನವಾಡಿಗಳಲ್ಲಿ  ಪೂರ್ವ ಪ್ರಾಥಮಿಕ ತರಗತಿಗಳನ್ನು  ಪ್ರಾರಂಭಿಸಲು ರಾಜ್ಯ ಸರ್ಕಾರ  ಸಜ್ಜಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಾಯೋಗಿಕವಾಗಿ ರಾಜಾಜಿನಗರ ಕ್ಷೇತ್ರದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಿದೆ. ಇಲ್ಲಿ ಕಂಡುಬರುವ ಸಕಾರಾತ್ಮಕ ಪ್ರತಿಕ್ರಿಯೆಯ ನಂತರ, ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ 4,000 ಅಂಗನವಾಡಿಗಳಿಗೆ ವಿಸ್ತರಿಸಲು ನಿರ್ಧರಿಸಿದೆ.

   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ಬೆಂಗಳೂರಿನಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದರು. ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆಯಲು ಅಗತ್ಯವಿರುವ ಕ್ರಮಗಳ ಬಗ್ಗೆ ಅವರು ಚರ್ಚಿಸಿದರು.

   ಸಭೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು, ಮಕ್ಕಳ ಪೌಷ್ಠಿಕಾಂಶ, ಎತ್ತರ ಮತ್ತು ತೂಕದ ಮೇಲ್ವಿಚಾರಣೆಯನ್ನು ಕುರಿತು ಚರ್ಚಿಸಲಾಯಿತು. ಈ ಯೋಜನೆಯನ್ನು ಹಂತ ಹಂತವಾಗಿ ಇತರ ಕಡೆಗೆ ವಿಸ್ತರಿಸಲಾಗುವುದು. 4,000 ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ.

ʼ   17,000ಕ್ಕೂ ಹೆಚ್ಚು ಪದವೀಧರರು ಅಂಗನವಾಡಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಮಕ್ಕಳಿಗೆ ಕಲಿಸಲು ನಾವು ಅವರಿಗೆ ತರಬೇತಿ ನೀಡುತ್ತಿದ್ದೇವೆ. ಪ್ರತ್ಯೇಕ ನೇಮಕಾತಿ ಇರುವುದಿಲ್ಲʼ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.ಎಲ್‌ಕೆಜಿ-ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಆಯ್ಕೆ ಮಾಡಲಾದ 4,000 ಅಂಗನವಾಡಿಗಳಲ್ಲಿ 950 ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹುಟ್ಟೂರಾದ ಬೆಳಗಾವಿಯಲ್ಲಿವೆ. ತರಗತಿಗಳನ್ನು ಪ್ರಾರಂಭಿಸಲು ಇಲಾಖೆಗೆ ಎರಡು ತರಗತಿ ಕೊಠಡಿಗಳ ಅಗತ್ಯವಿದೆ ಮತ್ತು ಸುಮಾರು 10,000 ಅಂಗನವಾಡಿಗಳು ಅಗತ್ಯ ಮೂಲಸೌಕರ್ಯಗಳನ್ನು ಹೊಂದಿವೆ.

Recent Articles

spot_img

Related Stories

Share via
Copy link