ಬೆಳಗಾವಿ:
ಬೆಳಗಾವಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲೆಗೆ ಹೋಗುವಂತೆ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವದಲ್ಲಿ ಶಾಲೆಗೆ ಹೋಗುವಂತೆ ಹೇಳಿದ್ದಕ್ಕೆ ವಿದ್ಯಾರ್ಥಿ ಯಶರಾಜ ಅನಿಲ ಪಾಚಂಗೆ (15) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
8ನೇ ತರಗತಿ ಓದುತ್ತಿದ್ದ ಯಶರಾಜ ಕಳೆದ 8 ದಿನದಿಂದ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗುವಂತೆ ಒತ್ತಾಯಿಸಿದಾಗ ಕುಂಬಾರನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.