ಆಂಧ್ರಪ್ರದೇಶ : 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ…!

ಆಂಧ್ರಪ್ರದೇಶ : 

   ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಬಗ್ಗೆ ಹೊರಗಡೆ ಯಾರಿಗಾದರೂ ಹೇಳಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯ ಶಿಕ್ಷಕ ಜಯರಾಜು ಬೆದರಿಕೆ ಹಾಕಿದ್ದ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಮೂರು ತಿಂಗಳಿನಿಂದ ಬಾಲಕಿಗೆ ಮುಟ್ಟು ಬಂದಿರಲಿಲ್ಲ.

   ಗಮನಿಸಿದ ಆಕೆಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ಬೆಳಕಿಗೆ ಬಂದಿತು. ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟಿದ್ದು, ಕುಟುಂಬವು ಪೊಲೀಸರನ್ನು ಸಂಪರ್ಕಿಸಿತ್ತು.

   ರಾಯವರಂ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಾಗಿದೆ. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಸಂತ್ರಸ್ತೆಗೆ ನ್ಯಾಯ ಒದಗಿಸಲು ಆರೋಪಿ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link