ಬೆಂಗಳೂರು:
ಗುರುವಾರ ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಅಬ್ಬರಿಸಿದ್ದ ಮಳೆ ಶುಕ್ರವಾರವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ಕರಾವಳಿ ಸೇರಿ ಹಲವೆಡೆ ನಿರಂತರ ಗಾಳಿಯೊಂದಿಗೆ ಸಾಧಾರಣ ವರ್ಷಧಾರೆಯಾಗುವ ಸಾಧ್ಯತೆ ಇದೆ . ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜತೆಗೆ ಹಗುರ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಬೀಸಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ 20°C ಮತ್ತು 28°C ಇರಲಿದೆ.
ಆ. 1ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆ ನಿರಂತರ ಗಾಳಿಯಿಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯಲಿದೆ.
ಆ. 2ರ ತನಕ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕೆಲವು ಕಡೆ ಗುಡುಗು ಕಂಡು ಬರುವ ಸಾಧ್ಯತೆಯೂ ಇರುವುದರಿಂದ ಈ ವೇಳೆ ಹೊರಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಆ. 2ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಆ. 3 ಮತ್ತು 4ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.








