ಕುಸುಮ್ ಯೋಜನೆಗೆ ಕರ್ನಾಟಕದ ರೈತರಿಂದ ನೀರಸ ಪ್ರತಿಕ್ರಿಯೆ : ಹೀಗಾಗಲು ಕಾರಣ ಏನು ಗೊತ್ತಾ….?

ಬೆಂಗಳೂರು

     ಸರ್ಕಾರದ ಸೌರ ಯೋಜನೆಗಳಲ್ಲಿ ಒಂದಾದ ಪಿಎಂ ಕುಸುಮ್ ಸ್ಕೀಮ್ ಕೃಷಿಕರಿಗೆ  ಸೌರವಿದ್ಯುತ್ ಒದಗಿಸುವುದರ ಜೊತೆಗೆ ಆದಾಯ ಪಡೆಯಲೂ ಸಹಾಯವಾಗುತ್ತದೆ. ಈ ಸ್ಕೀಮ್​ಗೆ ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಸ್ಪಂದನೆ ಸಿಕ್ಕುತ್ತಿದೆಯಾದರೂ, ಕರ್ನಾಟಕದಲ್ಲಿ ನೀರಸ ಪ್ರತಿಕ್ರಿಯೆ ಬಂದಿದೆಯಂತೆ. ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಇತ್ತೀಚೆಗೆ ಸಂಸತ್​ನಲ್ಲಿ ಎತ್ತಿದ ಪ್ರಶ್ನೆಗೆ ಉತ್ತರಿಸಿದ ನವೀಕರಣ ಇಂಧನ ಸಚಿವ ಶ್ರೀಪಾದ್ ನಾಯ್ಕ್ ಅವರು, ಕರ್ನಾಟಕದಲ್ಲಿ ಪಿಎಂ ಕುಸುಮ್ ಯೋಜನೆಗೆ  ನಿರೀಕ್ಷಿತ ರೀತಿಯಲ್ಲಿ ಸ್ಪಂದನೆ ಸಿಕ್ಕಿಲ್ಲ ಎಂದಿದ್ದಾರೆ.

 

ಏನಿದು ಕುಸುಮ್‌ ಯೋಜನೆ ಯಾರಿಗೆಲ್ಲಾ ಇದರಿಂದ ಪ್ರಯೋಜನ ….?

ಕಾಂಪೊನೆಂಟ್ ಎ: ವಿದ್ಯುತ್ ಸಬ್​ಸ್ಟೆಷನ್​ಗಳಿಂದ 5 ಕಿಮೀ ಪರಿಧಿಯೊಳಗೆ ಇರುವ ಬಂಜರು ಭೂಮಿಯಲ್ಲಿ 2 ಮೆ.ವ್ಯಾ.ವರೆಗೆ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಬಹುದು. ಇಲ್ಲಿ ಉತ್ಪತ್ತಿಯಾಗುವ ವಿದ್ಯುತ್ ಅನ್ನು ಡಿಸ್ಕಾಮ್​ಗೆ ಮಾರುವ ಮೂಲಕ ಆದಾಯ ಪಡೆಯಬಹುದು.

ಕಾಂಪೊನೆಂಟ್ ಬಿ: ಸೌರ ಕೃಷಿಪಂಪ್​ಸೆಟ್​ಗಳ ಸ್ಥಾಪನೆಗೆ ಸರ್ಕಾರವು ನೆರವು ಒದಗಿಸುತ್ತದೆ. ಸೌರ ಪಂಪ್​ಸೆಟ್ ಸ್ಥಾಪಿಸಲು ಕೇಂದ್ರದಿಂದ ಶೇ. 30, ರಾಜ್ಯದಿಂದ ಶೇ. 30 ನೆರವು ಸಿಗುತ್ತದೆ. ಉಳಿದ ಶೇ. 40ರಷ್ಟು ವೆಚ್ಚವನ್ನು ರೈತರು ಭರಿಸಬೇಕಾಗುತ್ತದೆ.

ಕಾಂಪೊನೆಂಟ್ ಸಿ: ಎಲೆಕ್ಟ್ರಿಸಿಟಿ ಗ್ರಿಡ್​ಗೆ ಕನೆಕ್ಟ್ ಆಗಿರುವ ಕೃಷಿ ಪಂಪ್​ಸೆಟ್​ಗಳ ಸೌರೀಕರಣ ಮಾಡಲಾಗುವ ಸ್ಕೀಮ್ ಇದು. ಇದರಲ್ಲಿ ಹೆಚ್ಚುವರಿ ವಿದ್ಯುತ್ ಅನ್ನು ಡಿಸ್ಕಾಮ್​ಗೆ ಮಾರಲು ಅವಕಾಶ ಇದೆ.

    ನವೀಕರಣ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ನೀಡಿದ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ 2025ರ ಜುಲೈವರೆಗೆ ಪಿಎಂ ಕುಸುಮ್ ಕಾಂಪೊನೆಂಟ್ ಬಿ ಅಡಿಯಲ್ಲಿ 41,365 ಸೋಲಾರ್ ಪಂಪ್​ಗಳನ್ನು ಮಂಜೂರು ಮಅಡಲಾಗಿದೆ. ಈ ಪೈಕಿ 2,388 ಪಂಪ್​ಸೆಟ್​ಗಳನ್ನು ಮಾತ್ರ ಅಳವಡಿಸಲಾಗಿದೆ. ಇನ್ನು, ಕಾಂಪೊನೆಂಟ್ ಸಿ ಅಡಿಯಲ್ಲಿ ಮಂಜೂರಾದ 6.28 ಲಕ್ಷ ಪಂಪ್​ಗಳ ಪೈಕಿ 23,133 ಪಂಪ್​ಗಳನ್ನು ಮಾತ್ರ ಸೋಲರೈಸ್ ಮಾಡಲಾಗಿದೆ. ಬೆಳಗಾವಿ, ಕಲಬುರ್ಗಿ, ಮೈಸೂರು ಇತ್ಯಾದಿ ಪ್ರಮುಖ ಕೃಷಿ ಪ್ರಾಧಾನ್ಯ ಜಿಲ್ಲೆಗಳಲ್ಲಿ ಬಹಳ ಕಡಿಮೆ ಅಳವಡಿಕೆ ಆಗಿರುವುದು ಗಮನಾರ್ಹ.

Recent Articles

spot_img

Related Stories

Share via
Copy link