ಗದಗ:
ಐಪಿಎಸ್ ಅಧಿಕಾರಿ ಸಹೋದರನೋರ್ವ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆನೇ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿದ ಅಕ್ಷತ್ ಹಾಗೂ ಸಹಚರನನ್ನು ಸ್ಥಳಿಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ಅನಿತಾ ಹದ್ದಣ್ಣವರ್ ಅವರ ಸಹೋದರ ಅಕ್ಷತ್ ಹದ್ದಣ್ಣವರ್ ನಿಂದ ಈ ಎಲ್ಲಾ ರಂಪಾಟ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಕ್ಷತ್ ಹದ್ದಣ್ಣವರ್ ಹಾಗೂ ಸಹಚರನಿಂದ ರಾತ್ರಿಯಿಡಿ ಕಿಟಲೆ, ಹೈಡ್ರಾಮಾ ನಡೆದಿದೆ.
ಕುಡಿದ ಮದದಲ್ಲಿ ಏಕಾಏಕಿ ಕಾರ್ ನೊಂದಿಗೆ ಪೊಲೀಸ್ ಠಾಣೆಗೆ ನುಗ್ಗಿದ್ದಾನೆ. ನಾನು ವಕೀಲ ಯಾರು ಏನು ಮಾಡ್ತಿರಿ ಅಂತ ಠಾಣೆಯ ಬಳಿಯ ಸ್ಥಳಿಯರೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ. ಸಿಪಿಐ, ಪಿಎಸ್ಐ ವಾಹನ ನಿಲ್ಲಿಸುವ ಸ್ಥಳದಲ್ಲಿ ಅಕ್ಷತ್ ತನ್ನ ಕಾರ್ ಪಾರ್ಕಿಂಗ್ ಮಾಡಿದ್ದಾನೆ. ಅಧಿಕಾರಿಗಳ ಕಾರ್ ನಿಲ್ಲಿಸಲು ಜಾಗೆ ಇಲ್ಲದಕ್ಕೆ ಠಾಣೆ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಏಕವಚನ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ..
ಇಷ್ಟೆಲ್ಲಾ ನಡೆದ್ರೂ ಕೇವಲ ಡ್ರಿಂಕ್ & ಡ್ರೈವ್ ಟೆಸ್ಟ್ ಮಾಡದೇ ಕಳುಹಿಸಿದ್ರಾ ಪೊಲೀಸರು.? ಅಕಸ್ಮಾತ್ ಜನಸಾಮಾನ್ಯರು ಹೀಗೆ ಮಾಡಿದ್ರೆ.? ಹೀಗೆ ಮಾಡಿದ ಜನಸಾಮಾನ್ಯರನ್ನು ಪೊಲೀಸರು ಸುಮ್ಮನೆ ಬೀಡುತ್ತಿದ್ದರಾ? ಅಧಿಕಾರಿ ಸಹೋದರನಿಗೆ ಒಂದು ನ್ಯಾಯ, ಜನ ಸಾಮಾನ್ಯರಿಗೊಂದು ಕಾನೂನಾ? ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ರೂ ಸುಮ್ಮನಿರುವುದಾದ್ರೂ ಯಾಕೆ? ಐಪಿಎಸ್ ಅಧಿಕಾರಿ ಸಹೋದರನ ಆಟಾಟೋಪ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಅಕ್ಷತ್ ಹದ್ದಣ್ಣವರ್ ಎಂಬುವವನು ಬೆಟಗೇರಿ ಪೊಲೀಸ್ ಠಾಣೆಗೆ ತೆರಳಿ ಸಿಬ್ಬಂದಿ ಜೊತೆಗೆ ಚೀರಾಡಿ, ವಾದ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 186, 504 ಹಾಗೂ 506 ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.








