ನಟ ಚೇತನ್‌ ಅಹಿಂಸಾ ಮೇಲೆ ಪ್ರಕರಣ ದಾಖಲು…..!

ಮಡಿಕೇರಿ:

    ನಾಗರಹೊಳೆ ರಕ್ಷಿತಾರಣ್ಯ  ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪದಡಿ ನಟ ಚೇತನ್ ಅಹಿಂಸಾ  ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆ.8 ರಂದು ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

   ಸಂರಕ್ಷಿತಾರಣ್ಯ ಪ್ರದೇಶದೊಳಗೆ ಅರಣ್ಯ ಇಲಾಖೆ ಅನುಮತಿಯಿಲ್ಲದೆ ಪ್ರವೇಶಿಸುವುದು, ಚಟುವಟಿಕೆಗಳನ್ನು ನಡೆಸುವುದು ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಅಪರಾಧವಾಗಿದೆ. ಈ ಕುರಿತು ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಪ್ರಕರಣ ದಾಖಲಿಸಿದ್ದಾರೆ. 

Recent Articles

spot_img

Related Stories

Share via
Copy link